ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವ ವಿದ್ಯಾಲಯ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ದಿಂದ ಬುಧವಾರ ಪ್ರತ್ಯೇಕವಾಗಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡ ಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಮೊದಲು ಕುವೆಂಪು ವಿವಿಯ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾಭವನದಲ್ಲಿ ನಡೆದ 34ನೇ ಘಟಿಕೋತ್ಸವದಲ್ಲಿ ಕಾಗೋಡು ತಿಮ್ಮಪ್ಪ, ಯೋಗಾಗುರು ನಾಗರಾಜ್ ಹಾಗೂ ವಿಜ್ಞಾನಿ ಪ್ರೊ.ಸಿ.ಎಸ್.ಉನ್ನಿ ಕೃಷ್ಣನ್ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ನಂತರ ಸಾಗರ ತಾಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾ ನಿಲಯದ ಆವರಣದಲ್ಲಿ ನಡೆದ 9ನೇ ಘಟಿಕೋತ್ಸವ ಸುಗ್ಗಿ ಸಂಭ್ರಮದಲ್ಲಿ ಕಾಗೋಡು ತಿಮ್ಮಪ್ಪ ನವರಿಗೆ ಎರಡನೇ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.