ಸೈಲ್-ವಿಐಎಸ್ಎಲ್ ಸಂಸ್ಥಾಪಕರ ದಿನಾಚರಣೆ ನಾಳೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಸೈಲ್ -ವಿಐಎಸ್ಎಲ್ ಸಂಸ್ಥಾಪಕರ ದಿನ ಮತ್ತು ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೈಲ್- ವಿಐಎಸ್ಎಲ್‌ ವತಿಯಿಂದ ಜ:18 ರ ನಾಳೆ ಸಂಜೆ 7 ಗಂಟೆಗೆ ವಿಐಎಸ್ಎಲ್ ಹಾಕಿ ಮೈದಾನದಲ್ಲಿ ಅಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. 

ಸೈಲ್ ಪ್ರದರ್ಶನವನ್ನು ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಾಂದ್ವಾನಿ ಉದ್ಗಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾಂಸ್ಕೃತಿಕ ತಂಡಗಳಿಗೆ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು