ಅಕ್ರಮ ಮದ್ಯ ಮಾರಾಟ: ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ವಿಜಯ ಸಂಘರ್ಷ ನ್ಯೂಸ್ 
ಹೊಸನಗರ: ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಕ್ರಮ ಮಧ್ಯ ಮಾರಾಟದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ತಾಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಬಕಾರಿ ಉಪ ನಿರೀಕ್ಷಕಿ ವಾಸವಿ ರವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಪ್ರತಿಭಟನಾಕಾರರು ನಾಡಕಛೇರಿಯವರೆಗೆ ತೆರಳಿ ಅಕ್ರಮ ಮಧ್ಯ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಸಭೆಯಲ್ಲಿ ಸಾಮಾಜಿಕ ಹೋರಾಟ ಗಾರ ಟಿ.ಆರ್. ಕೃಷ್ಣಪ್ಪ ಮಾತನಾಡಿ ಬೆಳ್ಳೂರು ಅರಸಾಳು ರಿಪ್ಪನ್ ಪೇಟೆ ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿ ಯ ವ್ಯಾಪ್ತಿಯಲ್ಲಿನ ಕೆಲವು ಚಿಲ್ಲರೆ ದಿನಸಿ ಅಂಗಡಿಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಕೃಷಿಕರು ಹಾಗೂ ಕೂಲಿ ಕಾರ್ಮಿಕರು ಮದ್ಯ ವ್ಯಸನಿ ಗಳಾಗುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರ ಕುಟುಂಬಗಳು ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ.

 ಹಳ್ಳಿಗಳ ಅಂಗಡಿಗಳಲ್ಲಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಮದ್ಯವನ್ನು ಸರಬರಾಜು ಮಾಡುತ್ತಿರುವ ರಿಪ್ಪನ್ ಪೇಟೆ ಹಾಗೂ ಬೇರೆ ಬೇರೆ ಕಡೆಯ ಸಗಟು ವ್ಯಾಪಾರರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಅಕ್ರಮ ಮದ್ಯ ಮಾರಾಟಕ್ಕೆ, ಅಬಕಾರಿ ಇಲಾಖೆ ಹಾಗೂ ರಕ್ಷಣಾ ಇಲಾಖೆಗಳ ಅಧಿಕಾರಿ ಗಳಿಗೆ ಅಕ್ರಮ ಮಧ್ಯ ಮಾರಾಟದ ಕುರಿತು ಗ್ರಾಮಸ್ಥರು ಅನೇಕ ಬಾರಿ ಮಾಹಿತಿಯನ್ನು ನೀಡಿದರು ಯಾವುದೇ ಕ್ರಮವನ್ನು ಕೈಗೊಳ್ಳದೆ ಅಕ್ರಮ ವಹಿವಾಟುಗಳಿಗೆ ಸಾತ್ ನೀಡುತ್ತಿರು ವುದು ಬೇಸರದ ಸಂಗತಿಯಾಗಿದೆ ಎಂದರು.

ಬೆಳ್ಳೂರು ಗ್ರಾಮಸ್ಥ ಕಟ್ಟೆ ನಾಗಪ್ಪ ಮಾತನಾಡಿ ಅಬಕಾರಿ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ಕುರಿತು ತನಿಖೆ ನಡೆಸಿ ಅಕ್ರಮ ವಾಗಿ ಮದ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಮೇಲೆ ಹಾಗೂ ಸರಬರಾಜು ಮಾಡುತ್ತಿರುವ ಸಗಟು ವ್ಯಾಪಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ರಕ್ಷಣಾ ಇಲಾಖೆಯ ಅಧಿಕಾರಿಗಳ ಕಚೇರಿಯ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವು ದೆಂದು ಹೇಳಿದರು.

ಪ್ರತಿಭಟನಾ ನಿರತರ ಅಹವಾಲನ್ನು ಆಲಿಸಿದ ತಾಲೂಕು ಅಬಕಾರಿ ಉಪನಿರೀಕ್ಷಕಿ ವಾಸವಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು