ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಜನ್ನಾಪುರದ ಬಸವೇಶ್ವರ ಪ್ರೌಢಶಾಲೆಯ ಬಾಲಕರು ದಾವಣಗೆರೆ ಬಾಪೂಜಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. 

ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶಾಲೆಯ ಜಿ.ಶ್ರೀನಿವಾಸ ವಿದ್ಯಾರ್ಥಿ ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿದ ತಂಡದ ಭಾಗವಾಗಿ ದ್ದಾನೆ.ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟ ದಲ್ಲಿ ಉತ್ತಮ ಸಾಧನೆ ಗಳಿಸಿದ ಈ ವಿದ್ಯಾರ್ಥಿಗಳಿಗೆ ಉಪನಿರ್ದೇಶಕ ಡಿ.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು