ಭದ್ರಾವತಿ-ರಸ್ತೆ ಅಭಿವೃದ್ಧಿಯ ಹೆಸರಲ್ಲಿ ಕಳಪೆ ಕಾಮಗಾರಿ: ತೀರ್ಥೇಶ್ ಆರೋಪ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರಸಭೆ ವ್ಯಾಪ್ತಿಯ ಪಾದಾಚಾರಿ ರಸ್ತೆ ಅಭಿವೃದ್ಧಿಯ ಹೆಸರಲ್ಲಿ ಕಳಪೆ ಹಾಗೂ ಅಸಮರ್ಪಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ತೀರ್ಥೇಶ್ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿತ್ತು. 

3,15 ಕೋಟಿ ರೂ ಕಾಮಗಾರಿ ಯಾಗಿದ್ದು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಿರ್ಮಿಸಿರುವಂತೆ ನಗರಸಭೆ ವ್ಯಾಪ್ತಿಯ ರಸ್ತೆಗಳು ಅಭಿವೃದ್ಧಿಗೆ ಶಾಸಕರು ಅನುದಾನ ನೀಡಿದ್ದು, ಕಾಮಗಾರಿಗಳು ಜನರು ನಿರೀಕ್ಷಿಸಿದಂತೆ ಇಲ್ಲದಿರುವುದು ವಿಪರ್ಯಾಸ ಎಂದರು.

ಸಾರ್ವಜನಿಕರ ತೆರಿಗೆ ಹಣ ಪೋಲಾಗ ದಂತೆ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸು ವಂತೆ ನಗರಸಭೆ ಪೌರಾಯುಕ್ತರು ಹಾಗೂ ನಗರಸಭಾಧ್ಯಕ್ಷರಿಗೆ ನೀಡಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾ ರೈತ ಘಟಕದ ಶರತ್, ಭಂಡಾರ ಹಳ್ಳಿ ಕಿರಣ್ ಕಬ್ಳಿಕಟ್ಟೆ ಮಂಜುನಾಥ್, ಪ್ರಶಾಂತ್ ಮತ್ತಿತರರು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು