ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕುವೆಂಪು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜ ವಾದಿ ನಾಯಕ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ನಗರದ ಮಾನವ ಹಕ್ಕುಗಳಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸ ಲಾಯಿತು.
ಸಮಿತಿ ಪದಾಧಿಕಾರಿಗಳು, ಪ್ರಮುಖರು ಕುವೆಂಪು ವಿಶ್ವ ವಿದ್ಯಾಲಯಕ್ಕೆ ತೆರಳಿ ಕಾಗೋಡು ತಿಮ್ಮಪ್ಪನವರೊಂದಿಗೆ ಸಂಭ್ರಮ ಹಂಚಿಕೊಂಡರು.
ಕಳೆದ ಕೆಲವು ತಿಂಗಳುಗಳಿಂದ ಸಮಿತಿಯಿಂದ ಕಾಗೋಡು ತಿಮ್ಮಪ್ಪ ನವರಿಗೆ ಕರ್ನಾಟಕ ರತ್ನ ಸೇರಿದಂತೆ ಗೌರವಪೂರ್ವಕವಾಗಿ ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಸಾಗರ ದಲ್ಲಿರುವ ಕಾಗೋಡು ತಿಮ್ಮಪ್ಪ ನವರ ನಿವಾಸದವರೆಗೂ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
ಅಲ್ಲದೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಯಂದು ಸಮಿತಿಯಿಂದ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸ ಲಾಗಿತ್ತು. ಇದೀಗ ಕುವೆಂಪು ವಿಶ್ವವಿದ್ಯಾಲಯ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಸಂಭ್ರಮ ವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸ ಬೇಕೆಂಬುದು ಸಮಿತಿ ಒತ್ತಾಯವಾಗಿದೆ.