ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ಮಕ್ಕಳನ್ನು ಅಂಕಗಳು ಪಡೆಯಲು ಪ್ರೋತ್ಸಾಹಿಸುವುದರ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸುವಂತೆ ಶಿಕ್ಷಕರು- ಪೋಷಕರು ಪ್ರೋತ್ಸಾಹಿಸ ಬೇಕು ಎಂದು ಮಂಗಳೂರು ರಾಮ ಕೃಷ್ಣ ಮಿಷನ್ ಸ್ವಚ್ಛ ಸಂಯೋಜಕ ರಂಜನ್ ಮಹಾರಾಜ್ ಅಭಿಪ್ರಾಯಪಟ್ಟರು.
ತಾಲೂಕಿನ ದೊಡ್ಡನಕಟ್ಟೆ ಸಮೀಪದ ಶ್ರೀ ಚಾಮುಂಡೇಶ್ವರಿ ಪಬ್ಲಿಕ್ ಸ್ಕೂಲ್ 2025ನೇ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆ ಹಲವು ಶಾರೀರಿಕ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದು, ಪೋಷಕರು ಮಕ್ಕಳ ಕ್ರೀಡೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ತಾವು ಬಿಡುವಿನ ವೇಳೆಯಲ್ಲಿ ಯೋಗಾ,ಧ್ಯಾನ, ಸೇರಿದಂತೆ ಕ್ರೀಡಾ ಚಟುವಟಿಕೆಯನ್ನು ರೂಡಿಸಿ ಕೊಳ್ಳಬೇಕು. ಆ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಲ್ಲಿ ಸಹಾಯಕ ವಾಗಿದೆ.
ಪ್ರತಿಯೊಬ್ಬ ಪೋಷಕರು ಸ್ಪರ್ಧಾ ಮನೋಭಾವನೆಯಿಂದ ಕ್ರೀಡಾ ಚಟುವಟಿಕೆ ಗಳಲ್ಲಿ ಪಾಲ್ಗೊಳ್ಳಿ. ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕು. ತಮ್ಮ ಮಕ್ಕಳನ್ನು ಉತ್ತಮ ಕ್ರೀಡಾಪಟು ಗಳಾಗಿ ರೂಪಿಸುವಲ್ಲಿ ತಮ್ಮ ಪಾತ್ರ ಆಗಾದವಾಗಿದೆ ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆದು ಕೊಳ್ಳಬೇಕು.ಜೊತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಆಡಳಿತ ಅಧಿಕಾರಿ ಮಂಜುರಾಮ್, ಮುಖ್ಯೋಪಾಧ್ಯಾಯ ಅಶೋಕ್, ಶಾಲಾ ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳು ಇದ್ದರು.
(*✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ*)
Tags
ಕೆ ಆರ್ ಪೇಟೆ ವರದಿ