ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಿಷ್ಠಾಚಾರ ಪಾಲನೆಗೆ ಆರ್.ವೇಣು ಗೋಪಾಲ್ ಆಗ್ರಹ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕು ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶಿಷ್ಠಾಚಾರ ಪಾಲನೆ (ಪ್ರೋಟೋಕಾಲ್) ಪ್ರಕಾರ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯ ಗಳನ್ನು ನೆರವೇರಿಸಿಕೊಡುವಂತೆ ಆಗ್ರಹಿಸಿ ನಗರದ ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 25 ವರ್ಷಗಳ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಗೊಂಡಿದ್ದು ಗ್ರಾಮಸ್ಥರೆಲ್ಲಾ ಕಂಗಾಲಾ ಗಿರುವುದನ್ನು ಮನಗಂಡು ಗ್ರಾಮಸ್ಥರ ಮನವಿ ಮೇರೆಗೆ ನಿರಂತರವಾಗಿ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಕಾರ್ಯಾರಂಭ ಮಾಡುವುದರ ಬಗ್ಗೆ ಹೋರಾಟದ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿರುತ್ತದೆ. ಆದರೆ ಇದುವರೆಗೂ ಪಂಚಾಯತ್ ವ್ಯಾಪ್ತಿಯಲ್ಲಿ ಶಿಷ್ಟಾಚಾರ ಪಾಲನೆ ಮಾಡದೇ ಇರುವುದು ಕ್ರಮವಲ್ಲ. ಈ ಬಾರಿ ಇದಕ್ಕೆ ತಾವುಗಳು ಆಸ್ಪದ ಕೊಡದೇ ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗಳ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಿದರು. 

ಗ್ರಾಮಾಂತರ ಪ್ರದೇಶ ವ್ಯಾಪ್ತಿಯ ಉಂಬ್ಲೆ ಬೈಲು ಹಾಗೂ ಕಲ್ಲಹಳ್ಳಿ ಗ್ರಾಮಪಂಚಾಯತಿ ಮತ್ತು 28 ಹಳ್ಳಿ ಗಳಲ್ಲಿ ಹಾಗೂ ಸಿಂಗನಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ, ಮಾರಶೆಟ್ಟಿಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಮತ್ತು 23 ಹಳ್ಳಿಗಳಲ್ಲಿ, ಆನವೇರಿ ಗ್ರಾಮಪಂಚಾಯತಿ ಮತ್ತು 37 ಹಳ್ಳಿಗಳಲ್ಲಿ ಕುಂಸಿ ಮತ್ತು ಗಾಜನೂರು ಗ್ರಾಮಪಂಚಾ ಯತಿ ಮತ್ತು 89 ಹಳ್ಳಿಗಳಲ್ಲಿ ಬಹುಗ್ರಾಮ ಕುಡಿಯುವ ಯೋಜನೆಯ ನೀರಿನ ಟೆಂಡ‌ರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಶಿಷ್ಟಾಚಾರ ಪಾಲನೆ (ಪ್ರೋಟೋಕಾಲ್) ಪ್ರಕಾರ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿಯಲ್ಲಿ ಅಗ್ರಹಿಸಿದರು.

ಅಂತರಗಂಗೆ 21, ದೊಡ್ಡರಿ ಮತ್ತಿತರೇ 16 ಹಳ್ಳಿ, ತಡಸ ಮತ್ತು 4 ಹಳ್ಳಿಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಯೋಜನೆ ಪೂರ್ಣಗೊಂಡಿರುವು ದರಿಂದ ಉದ್ಘಾಟನಾ ಕಾರ್ಯಕ್ರಮ ವನ್ನು ಕೈಗೆತ್ತಿಕೊಳ್ಳಲು ಸಂಬಂಧ ಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಛೆರ್ಮನ್ ಹಾಗೂ ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣು ಗೋಪಾಲ್ ಮನವಿಯಲ್ಲಿ ಕೊರಿದ್ದಾರೆ. ಈ ಸಂದರ್ಭದಲ್ಲಿ ಕಲ್ಲಹಳ್ಳಿ ಗ್ರಾಪಂ ಸದಸ್ಯ ಧರ್ಮಣ್ಣ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು