ಭದ್ರಾವತಿ-ಭೀಕರ ರಸ್ತೆ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿ ಸಾವು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಬಾರಂದೂರು ಬಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೃತಿ(21) ಎಂದು ಗುರುತಿಸಲಾಗಿದೆ.
ಹೆದ್ದಾರಿಯ ಬಾರಂದೂರು ಬಳಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದಾರೆ.

ತರೀಕೆರೆಯ ಅಮೃತಾಪುರ ಮೂಲದ ಮೃತ ವಿದ್ಯಾರ್ಥಿನಿ ಕೃತಿ ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದರು ಎಂದು ಹೇಳಲಾಗಿದೆ.

ಅಪಘಾತದ ತೀವ್ರತೆಗೆ ಟ್ರಾಕ್ಟರ್ ಪಲ್ಟಿ ಯಾಗಿದೆ.ಕಾಗದ ನಗರ ಠಾಣಾ ವ್ಯಾಪ್ತಿ ಯಲ್ಲಿ ಘಟನೆ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು