ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕರ್ನಾಟಕ ಲೋಕಾಯುಕ್ತ ವತಿಯಿಂದ ಜ.28 ರ ನಾಳೆ ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ನಗರಸಭೆ ಸಭಾಂಗಣದಲ್ಲಿ ಸಾರ್ವಜ ನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆ ನಡೆಸಲಾಗು ವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ನೀಡಲು ಅವಕಾಶ ವಿದ್ದು, ಸರ್ಕಾರಿ ಯೋಜನೆಗಳನ್ನು ಫಲಾನುಭವಿ ಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿ ತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ನೀಡಬಹುದಾಗಿದೆ.
Tags
ಭದ್ರಾವತಿ ಲೋಕಾಯುಕ್ತ