ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ತಾಲ್ಲೂಕಿನ ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿoದ ಜ: 25 ರಂದು ಬೆಳಗ್ಗೆ 10.00 ಘಂಟೆಯಿoದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿoದ ಸರಬರಾಜಾ ಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣೆ ಹೊಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಕು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣ ಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವ್ಯತ್ಯೆಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.