ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
2022ರಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಈ ಸಂಬಂಧ ಬಾಲಕಿ ನೀಡಿದ್ದ ದೂರಿನ ಹಿನ್ನೆಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾ ಗಿತ್ತು. ಅಂದಿನ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಎಫ್‌ಟಿಎಸ್‌ಸಿ ನ್ಯಾಯಾಧೀಶರಾದ ಮೋಹನ್ .ಜೆ.ಎಸ್, ಆರೋಪ ಸಾಬೀತಾದ ಹಿನ್ನೆಲೆ 19 ವರ್ಷದ ಯುವಕನಿಗೆ ಶಿಕ್ಷೆ ವಿಧಿಸಿದ್ದಾರೆ. ಯುವಕರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 2.01 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸದೆ ಇದ್ದರೆ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.