ಫೆ:27ಕ್ಕೆ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ: ಗಣ್ಯರಿಗೆ ಸನ್ಮಾನ ಬಿ.ಎನ್‌.ರಾಜು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27ರಂದು ಸಂಜೆ 4 ಗಂಟೆಗೆ ನ್ಯೂಟೌನ್ ರೋಟರಿ ಸಮುದಾಯ ಭವನದಲ್ಲಿ ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಪಿ.ಐ. ರಾಜ್ಯ ಮಂಡಳಿ ಸದಸ್ಯ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ.ಮಾಯಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ.ಚಂದ್ರ
ಶೇಖರಯ್ಯ ಉಪನ್ಯಾಸ ನೀಡುವರು. ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ವ್ಯವಸ್ಥಾಪಕ ಎನ್. ಕೃಷ್ಣಪ್ಪ, ಡಿಎಸ್‌ಎಸ್‌ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್‌. ಹಾಲೇಶಪ್ಪ, ನ್ಯಾಯವಾದಿ ಟಿ.ಚಂದ್ರೇಗೌಡ, ಎಂಪಿಎಂ ನೊಂದ ಕಾರ್ಮಿಕರ ಹೋರಾಟ ಸಮಿತಿ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್. ಅರುಣ್ ಕುಮಾರ್‌ ಇನ್ನಿತರರು ಉಪಸ್ಥಿತರಿರುವರು.

ಉಳಿದಂತೆ ದಸಂಸ ರಾಜ್ಯ ಮುಖಂಡ ಸತ್ಯ ಭದ್ರಾವತಿ, ಹಿರಿಯ ಕಲಾವಿದ ಮಂಜುನಾಥ್ ಅವರ 60ನೇ ವರ್ಷದ ಜನ್ಮದಿನ ಅಂಗವಾಗಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗು ವುದು. ಅಲ್ಲದೇ, ನಗರದ 30ಕ್ಕೂ ಹೆಚ್ಚು ಗಣ್ಯರನ್ನು ಗೌರವಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಐ.ಎಲ್. ಬ್ರಹ್ಮಲಿಂಗಯ್ಯ,ಅರುಣ್ ಕುಮಾ‌ರ್ ಇನ್ನಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು