ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ‌ ಅಧಿಕಾರಿಗಳ‌ ಪ್ರತಿಭಟನೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಗ್ರಾಮ ಆಡಳಿತ‌ ಅಧಿಕಾರಿಗಳು ( ಗ್ರಾಮ ಲೆಕ್ಕಿಗರು) ಸೋಮವಾರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಧರಣಿ ನಡೆಸಿದರು.ಕಂದಾಯ ಇಲಾಖೆಯ ಮೂಲ‌ ಆಧಾರ ಸ್ತಂಭವಾಗಿ ಕಾರ್ಯ ನಿರ್ವಹಿಸುತ್ತಿ ರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ಕಛೇರಿ ಪೀಠೋಪಕರಣಗಳನ್ನು ಒದಗಿಸ ಬೇಕು ಸೇರಿದಂತೆ ಅನೇಕ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ,
ರಾಜ್ಯಾದ್ಯಂತ ಪ್ರತಿಭಟನೆ ನಡೆಸ ಲಾಗುತ್ತಿದ್ದು ತಾಲೂಕಿನ ಎಲ್ಲಾ ವಿಎ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾ ಗದೇ ಪ್ರತಿಭಟನೆ ನಡೆಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.

ಗ್ರಾಮ ಆಡಳಿತ‌ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿಕುಮಾರ್ ನೇತೃತ್ವ ವಹಿಸಿದ್ದರು. ಈ ಸಂದರ್ಭ ದಲ್ಲಿ ತಾಲೂಕ್ ಸಂಘದ ಪದಾಧಿಕಾರಿ ಗಳಾದ ಶಿವಣ್ಣ, ರಾಜೇಶ್ ಬಾಬು ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು