ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಜ್ಯದಲ್ಲಿನ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಕನ್ನಡ ಭಾಷೆ ಮಾತನಾಡುವ ಅಧಿಕಾರಿ ಗಳನ್ನು ನೇಮಿಸ ಬೇಕು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದರು.
ಅವರು ಸೋಮವಾರ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ಶೇಕಡ 88 ಬೇರೆ ರಾಜ್ಯದ ಅಧಿಕಾರಿಗಳು ಕಾರ್ಯನಿರ್ವಹಿಸು ತ್ತಿದ್ದು ಸಾರ್ವಜನಿಕರಿಗೆ, ರೈತರಿಗೆ ಭಾಷೆಗಳ ಕೊರತೆ ಯಿಂದ ಬ್ಯಾಂಕ್ ವ್ಯವಹಾರಗಳಲ್ಲಿ ತೊಂದರೆ ಯಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಂತ ಇರುವ ಎಲ್ಲಾ ಬ್ಯಾಂಕು ಗಳಲ್ಲಿ ಕನ್ನಡ ಭಾಷೆ ಮಾತನಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನೇಮಿಸಬೇಕು.ಕೂಡಲೇ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲೆಗಳ ಲೀಡ್ ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಗ್ರಾಹಕರಿಗೆ ಅನುಕೂಲ ಮಾಡಿ ಕೊಡುವಂತೆ ಸೂಚಿಸ ಬೇಕೆಂದು ಆಗ್ರಹಿಸಿ ಗ್ರೇಡ್-2 ತಹಸೀಲ್ದಾರ್ ಮಂಜನಾಯ್ಕ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದರು.