ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಡಾ: ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ರವರ ಪುತ್ತಳಿಗೆ ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ರಾಜ್ಯಾಧ್ಯಕ್ಷ ನಾರಾಯಣ ಐಹೊಳೆ ನೇತೃತ್ವದಲ್ಲಿ ಬುಧವಾರ ಕ್ಷೀರಾಭಿಷೇಕ ಮಾಡಲಾಯಿತು.
ನಂತರ ಮಾತನಾಡಿದ ನಾರಾಯಣ ಐಹೊಳೆ ರಾಜ್ಯದಲ್ಲಿ ಡಾ:ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಅಂಗವಾಗಿ ಸಮಾಜದಲ್ಲಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಮಾಡುತ್ತಿರುವ ವ್ಯಕ್ತಿಗಳಿಗೆ ಡಾ: ಬಿ.ಆರ್ ಅಂಬೇಡ್ಕರ್ ರವರ ಪ್ರಶಸ್ತಿ ಪುರಸ್ಕಾರ ಜೊತೆಗೆ 5 ಲಕ್ಷ ಹಣ ಸಹಾಯಧನ ನೀಡಿ ಗೌರವಿಸಿವುದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಾಸಂಖ್ಯಾತರ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಅಕ್ಕಿ ನೀಡಬೇಕು.
ರಾಜ್ಯದಲ್ಲಿ ವಿಧವೆಯ ಅಭಿವೃದ್ಧಿ ನಿಗಮ ಸ್ಥಾಪಿಸಿ ನಿಗಮಕ್ಕೆ ವಿಧವ ಮಹಿಳೆಯರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಎಲ್ಲಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಸರ್ಕಾರ ಡಿ ಗ್ರೂಪ್ ನೌಕರರೆಂದು ಪರಿಗಣಿಸಿ, ಏಜೆನ್ಸಿ ಮೂಲಕ ಸಂಬಳ ನೀಡುತ್ತಿದ್ದು ಅದರ ಬದಲಿಗೆ ಜಿಲ್ಲಾಧಿಕಾರಿಗಳ ಮೂಲಕ ವೇತನವನ್ನು ನೀಡಬೇಕು ಹಾಗೂ ಈಗ ನೀಡುತ್ತಿರುವ ವೇತನದ ಬದಲು ತಿಂಗಳಿಗೆ ಸುಮಾರು 35 ಸಾವಿರಗಳಿಗೆ ಹೆಚ್ಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ನೆರೆ ರಾಜ್ಯ ಕೇರಳ ರಾಜ್ಯಗಳಲ್ಲಿ ಅನುಷ್ಠಾನ ಗೊಳಿಸಿದ ರೀತಿಯಲ್ಲಿ ರಾಜ್ಯದಲ್ಲೂ ವಿದ್ಯಾರ್ಥಿನಿಯರುಗಳು ಮತ್ತು ಉದ್ಯೋಗ ಮಾಡುತ್ತಿರುವ ಮಹಿಳೆಯವರಿಗೆ ಋತ್ತು ಚಕ್ರದ ರಜೆ ಘೋಷಣೆ ಆಗಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಡಾ :ಬಿ.ಆರ್. ಅಂಬೇಡ್ಕರ್ ಕ್ಷೇಮಾ ಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಪ್ರಕಾಶ್ ಸೇನೆಯ ಪ್ರಮುಖರಾದ ಮಣಿ, ಸುಬ್ರಮಣಿ, ಪಿ.ಮೂರ್ತಿ, ಮುರುಗನ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
Tags
ಭದ್ರಾವತಿ ವರದಿ