ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಸರ್ಕಾರಿ ನೌಕರರ ಸಂಘದ ಆಶ್ರಯದ ವಿಇಎಸ್ ಸಂಸ್ಥೆಯ 2024-25 ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಶನಿವಾರ ಸಂಜೆ ಆಚರಿಸಲಾಯಿತು.
ಎಂಎಲ್ ಸಿ ಬಲ್ಕಿಷ್ ಬಾನು, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷ ಬಿ.ಕೆ.ಶಿವಕುಮಾರ್ ಉದ್ಘಾಟಿಸಿ ಸಂಸ್ಥೆಯ ಅಭಿವೃದ್ಧಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಮಣಿಶೇಖರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಮಂಜುನಾಥ.ಎಸ್.ಆರ್, ತಹಸಿಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್, ಡಿ.ಸಿ.ಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್. ಕೆ.ಮೋಹನ್ ಸ್ವಾಗತಿಸಿ, ನಿರ್ದೇಶಕ ಚೆನ್ನಯ್ಯ.ಬಿ ನಿರೂಪಿಸಿದರೆ,ಖಜಾಂಚಿ ಕೆ. ಆರ್. ಪ್ರಶಾಂತ್ ವಂದಿಸಿದರು.
ಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ, ಕಾಲೇಜು ಹಾಗೂ ಬಿ.ಇಡಿ ವಿಭಾಗಗಳ ಎಲ್ಲಾ ವಿದ್ಯಾರ್ಥಿ ಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಗಮನವನ್ನು ಸೆಳೆದರು. ಎಸ್ ಎಸ್ ಎಲ್ ಸಿ., ಪಿ.ಯು.ಸಿ ಹಾಗೂ ಬಿ.ಇಡಿ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾ ವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ರಾಜ್ಯ ಮಟ್ಟದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಆಡಳಿತಾಧಿಕಾರಿಗಳು ಹಾಗೂ ಬಿ.ಇಡಿ ವಿಭಾಗದ ಪ್ರಾಂಶುಪಾಲ ಡಾ.ಎಸ್.ಪಿ. ರಾಕೇಶ್ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಉಪಸ್ಥಿತರಿದ್ದರು.