ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ:14 ರ ಶುಕ್ರವಾರ ಸಂಜೆ 5 ಗಂಟೆಗೆ ಶಾಲಾ ವಾರ್ಷಿಕೋತ್ಸವ ಸಮಾರಂಭ-2024-25 ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆಯಲ್ಲಿ ಬುಧವಾರ ಸಂಜೆ ಯಾವ ಖಾಸಗಿ ಶಾಲೆಗೂ ಕಮ್ಮಿ ಇಲ್ಲ ಎನ್ನುವಂತೆ ಶಾಲೆಗೆ ವರ್ಣರಂಜಿತ ದೀಪಾಲಂಕಾರ ಮಾಡಲಾಗಿದೆ.
ಶಾಲೆಯ ಹಳೆಯ ವಿದ್ಯಾರ್ಥಿಗಳು ಸಾಥ್ ನೀಡಿದ್ದು, ನಾಳಿನ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿ ಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಲು ಮುಖ್ಯ ಶಿಕ್ಷಕಿ ಕಲಾವತಿ ಕೊರಿದ್ದಾರೆ. ಬನ್ನಿ ಪ್ರೋತ್ಸಾಹಿಸಿ.