ಇನ್ವೆಸ್ಟ್ ಕರ್ನಾಟಕಕ್ಕೆ ಶಿವಮೊಗ್ಗದ ಬಿ.ಗೋಪಿನಾಥ್ ತಂಡ ಭೇಟಿ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸೇರಿದಂತೆ ಪದಾಧಿಕಾರಿಗಳು ಭೇಟಿ ನೀಡಿದರು.

ಸಮಾವೇಶದದಲ್ಲಿ ಹೊಸ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನದ ಆವಿಷ್ಕಾರದ ಬಗ್ಗೆ ಮಾಹಿತಿ ಪಡೆಯ ಲಾಯಿತು. ವಿವಿಧ ಸಭಾಂಗಣದಲ್ಲಿ ನಡೆಯುತ್ತಿದ್ದ ಗೋಷ್ಠಿಗಳಲ್ಲಿ ವಿಷಯ ತಜ್ಞರ ಸಮಾಲೋಚನೆ ಶಿವಮೊಗ್ಗದ ಪದಾಧಿಕಾರಿ ಗಳು ಪಾಲ್ಗೊಂಡಿದ್ದರು.

ಸಮಾವೇಶ ಉದ್ದಿಮೆ ನೀತಿ, ನಿರೂಪಣೆ, ನಾವಿನ್ಯ ಕ್ಷೇತ್ರದ ದಿಗ್ಗಜರ ಸಮಾಗಮ ಮತ್ತು ಚಿಂತನ ಮಂಥನಕ್ಕೆ ವೇದಿಕೆಯಾಗಿತ್ತು. ರಾಜ್ಯದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿ 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಕೈಗಾರಿಕಾ ಪ್ರಗತಿ ಭವಿಷ್ಯವನ್ನು ರೂಪಿಸಲು ಒಳನೋಟ ನೀಡಿದೆ. ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮುಖ್ಯಸ್ಥ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಗೂ ಸಚಿವ ಸಂಪುಟದ ಕಾರ್ಯ ಅಭಿನಂದನೀಯ ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಪ್ರದೀಪ್ ವಿ.ಎಲಿ, ಎಸ್.ಪಿ.ಶಂಕರ್, ಕೆ.ಎನ್.ರಾಜಶೇಖರ್ ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು