ರೋಟರಿಯಲ್ಲಿ ತೊಡಗಿಸಿಕೊಳ್ಳುವುದ ರಿಂದ ಸೇವಾ ಕಾರ್ಯ ಕೈಗೊಳ್ಳಲು ಸಾಧ್ಯ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ರೋಟರಿ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣಕುಮಾರ್ ಹೇಳಿದರು.

ರೋಟರಿ ಕ್ಲಬ್ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯ ಗಳನ್ನು ನಡೆಸಿಕೊಂಡು ಬರುತ್ತಿದ್ದು, ವಿಶೇಷ ಅಭಿಯಾನಗಳನ್ನು ನಡೆಸಿದೆ ಎಂದು ತಿಳಿಸಿದರು.

ರೋಟರಿ ಜಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಹಾಗೂ ಮಾಜಿ ಶಾಸಕ ಅಶೋಕ್ ನಾಯ್ಕ್ ಅವರನ್ನು ರೋಟರಿ ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ಜಿಲ್ಲಾ ಗವರ್ನರ್ ಆಗಿ ಆಯ್ಕೆ ಆಗಿರುವುದು ಹೆಚ್ಚು ಸಂತಸ ತಂದಿದೆ. ಜವಾಬ್ದಾರಿಯನ್ನು ಉತ್ತಮ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ನಿರ್ವಹಿಸುತ್ತೇನೆ. ಈವರೆಗೂ ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

ನಿಯೋಜಿತ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ರೋಟರಿ ಸಂಸ್ಥೆಗಳಿಂದ ಸಮಾಜಕ್ಕೆ ಉತ್ತಮ ವಾದ ಸಮಾಜಮುಖಿ ಕಾರ್ಯಕ್ರಮ ಗಳನ್ನು ಮತ್ತಷ್ಟು ಹಮ್ಮಿಕೊಳ್ಳ ಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೂಟೋಜಿ, ಜಿ.ವಿಜಯಕುಮಾರ್, ಗೀತಾ ಜಗದೀಶ್, ಜಿ.ಎನ್.ಪ್ರಕಾಶ್, ಎಸ್.ಕೆ. ಕುಮಾರ್, ಅರುಣ್ ಕುಮಾರ್, ಚುಡಾಮಣಿ ಪವಾರ್, ಬಸವರಾಜ, ಜಯಶೀಲಶೆಟ್ಟಿ ಹಾಗೂ ಸೆಂಟ್ರಲ್ ಕಬ್ಬಿನ ಎಲ್ಲಾ ಸದಸ್ಯರು ಕುಟುಂಬ ಸಮೇತರಾಗಿ ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು