ಭದ್ರಾವತಿ: ಸಲಹಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಹಿಂದುಳಿದ ವರ್ಗಗಳ ಅಲೆಮಾರಿ/ ಹಾಗೂ ಅರೆಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸುವಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಸಲಹಾ ಸಮಿತಿಯನ್ನು ಪುನರ್ ರಚಿಸಿ ಮುಂದಿನ 3 ವರ್ಷಗಳ ಅವಧಿಗೆ ವಿಸ್ತರಿಸಲಾಗಿದೆ.

ಈ ಸಲಹಾ ಸಮಿತಿ ರಚಿಸಲು ಭದ್ರಾವತಿ ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯನ್ನು ನಾಮ ನಿರ್ದೇಶಿಸುವ ಬಗ್ಗೆ ಅರ್ಹರಿಂದ ಅರ್ಜಿ ಆಹ್ವಾನಿಸ ಲಾಗಿದ್ದು, ಫೆ.28 ರೊಳಗಾಗಿ ಜಿಲ್ಲಾ ಮಟ್ಟದ /ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆ ಪ್ರತಿನಿಧಿಯವರು ಅಗತ್ಯ ದಾಖಲಾತಿಗಳೊಂದಿಗೆ ತಾಲೂಕು ಕಲ್ಯಾಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸದಾಶಿವ ಕಾಂಪ್ಲೇಕ್ಸ್, 2ನೇ ಮಹಡಿ, ಸಿ.ಎನ್.ರಸ್ತೆ, ಭದ್ರಾವತಿ ಕಚೇರಿಗೆ ದಾಖಲಾತಿಗಳನ್ನು ಸಲ್ಲಿಸುವಂತೆ ಇಲಾಖೆಯ ಹಿಂ.ವ.ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08282-264644 ನ್ನು ಸಂಪರ್ಕಿಸುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು