ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಲಿಂಗಾನುಪಾತದ ಅಂತರ ವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕ ರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆ ಜಾರಿ ಮಾಡಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ತಿಳಿಸಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯತ್, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯ ದಲ್ಲಿ "ಬೇಟಿ ಬಚಾವೋ ಬೇಟಿ ಪಡಾವೋ'' ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದಡಿ ಹೊಳೆಹೊನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳ ಲಾಗಿದ್ದ "ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಉಪನ್ಯಾಸ ಕಾರ್ಯಗಾರ ಹಾಗೂ ತಾಲ್ಲೂಕು ಮಟ್ಟದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭೇಟಿ ಬಚಾವೋ ಭೇಟಿ ಪಡವೋ ಯೋಜನೆಯ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆ ಯನ್ನು ಹೆಚ್ಚಿಸಲು ಪ್ರಯತ್ನಿಸಲಾಗು ತ್ತಿದೆ. "ವರದಕ್ಷಿಣೆ ಮತ್ತು ಬಾಲ್ಯ ವಿವಾಹವನ್ನು ನಿಷೇಧಿಸುವುದು ಮತ್ತು ಸರಳ ವಿವಾಹವನ್ನು ಪ್ರೋತ್ಸಾಹಿಸು ವುದು ನಮ್ಮೆಲರ ಜವಾಬ್ದಾರಿಯಾಗಿದೆ" ಎಂದು ವಿವರಿಸಿದರು.
ಹೊಳೆಹೊನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಉಪನ್ಯಾಸಕ ಪೀಟರ್ ಸಿ ಸೆರಾವ್ ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಡಾ.ಕಲ್ಪನಾ ಹೆಚ್.ಕೆ(ಸೈಕಾಲಜಿಸ್ಟ್) ವ್ಯಕ್ತಿತ್ವ "ವಿಕಸನ ಮತ್ತು ವೃತ್ತಿ ಮಾರ್ಗದರ್ಶನ" ಕುರಿತು ಉಪನ್ಯಾಸ ನೀಡಿದರು.
ಮೇಲ್ವಿಚಾರಕಿ ಸೌಮ್ಯ ಸ್ವಾಗತಿಸಿ, ಶಾಂತಕುಮಾರಿ ವಂದಿಸಿದರೆ,ನಾಗರತ್ನ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಎಲ್ಲಾ ಮೇಲ್ವಿಚಾರಕರು ಹಾಗೂ ಅಧಿಕಾರಿ, ಸಿಬ್ಬಂದಿಗಳು, ಪದವಿ ಪೂರ್ವ ಕಾಲೇಜಿನ 150 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Tags
ಭದ್ರಾವತಿ ಸುದ್ದಿ