ಕಾಡುಕೋಣ ಅಕ್ರಮ ಬೇಟೆ: ಮೂವರು ಆರೋಪಿಗಳ ಅರೆಸ್ಟ್: ಇಬ್ಬರೂ ನಾಪತ್ತೆ

ವಿಜಯ ಸಂಘರ್ಷ ನ್ಯೂಸ್ 
ಹೊಸನಗರ: ಸಾಗರ ತಾಲೂಕಿನ ನಗರ ವಲಯ ಅರಣ್ಯದಲ್ಲಿ ಜ: 8ರ ಬೆಳಗಿನ 3 ಗಂಟೆಯ ಸುಮಾರಿಗೆ ಸಂಪೆಕಟ್ಟೆ ಶಾಖೆ ಹೊಸೂರು ಗ್ರಾಮದ ಸರ್ವೆ ನಂಬರ್ 4 ಮತ್ತಿಕೈ ಮೀಸಲು ಅರಣ್ಯ ಪ್ರದೇಶದಲ್ಲಿ ಸುಮಾರು 4 ಅಥವಾ 5 ವರ್ಷದ ಒಂದು ಹೆಣ್ಣು ಕಾಡುಕೋಣವನ್ನು ಅಕ್ರಮ ಬೇಟೆ ಯಾಡಿ ಕಾಲು ಹಾಗು ತಲೆಯನ್ನು ಸ್ಥಳದಲ್ಲೆ ಬಿಟ್ಟು, ಮಾಂಸವನ್ನು ಸಾಗಾಣಿಕೆ ಮಾಡಿರುವ ಖಚಿತ ಮಾಹಿತಿ ದೊರೆತು ವನ್ಯಜೀವಿ ಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳು ನಾಪತ್ತೆ ಆಗಿದ್ದರು. 

ಸಾಗರ ಡಿಎಫ್ ಓ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ಹೊಸನಗರ ಎಸಿಎಫ್ ಕೆ.ಬಿ. ಮೋಹನ್ ಕುಮಾರ್, ನಗರ ಆರ್ ಎಫ್ ಒ ಸಂತೋಷ್ ಮಲ್ಲನಗೌಡ್ರು, ಹೊಸನಗರ ‌ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗು ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಆರೋಪಿಗಳಾದ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ವಾಸಿ ಮಹಮ್ಮದ್ ಅಶ್ರಫ್, ಬೈಂದೂರು ತಾಲೂಕಿನ ಶಿರೂರು ಗ್ರಾಮದ ಹಣಬರಕೇರಿ ವಾಸಿ ಆಲಿಬಾಪು ಯಾಸೀನ್ ಹಾಗೂ ಬೈಂದೂರು ತಾಲೂಕು ಶಿರೂರು ಗ್ರಾಮದ ಮದ್ದೋಡಿ ರೋಡ್ ಜೋಗೂರ್ ಕ್ರಾಸ್ ವಾಸಿ ವಾಸಿಂ ಅಕ್ರಂ ನನ್ನು ಬಂದಿಸಿದ್ದು, ಇನ್ನುಳಿದ ಇಬ್ಬರೂ ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ. 

ಕಾರ್ಯಚರಣೆಯಲ್ಲಿ ನಗರ ವಲಯ ಉಪ ಅರಣ್ಯಾಧಿಕಾರಿ ಸತೀಶ್ , ಟಿ.ಪಿ.ನರೇಂದ್ರ ಕುಮಾರ್, ಅಮೃತ್ ಸುಂಕದ್, ರಾಘವೇಂದ್ರ ತೆಗ್ಗಿದ್, ರಾಜೇಂದ್ರ ಜಿ.ಡಿ, ಹಾಗು ಗಸ್ತು ಅರಣ್ಯ ಪಾಲಕರಾದ ಮನೋಜ್ ಕುಮಾರ್‌ ಕನೇರಿ,ಯೋಗರಾಜ್,ಎ.ವಿ.ಮನೋಜ್,ಸುಬ್ಬಣ್ಣ ಸತೀಶ್, ದಿವಾಕರ್, ಚಾಲಕ ರಾಮುಗಾಣಿಗ ಸಿಬ್ಬಂದಿಗಳು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು