ಕಮಲಕುಮಾರಿ ರವರಿಗೆ "ಸಮಾಜಶ್ರೀ" ರಾಜ್ಯ ಪ್ರಶಸ್ತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಸಮಾಜಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಿದೆ. ಸಾಹಿತ್ಯ, ರಾಜಕೀಯ ಹಾಗು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ವಿಭಿನ್ನ ವಾಗಿ ತೊಡಗಿಸಿ ಕೊಂಡಿದ್ದು, ಮಹಿಳಾ ಸೇವಾ ಸಮಾಜ, ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 

ಇವರ ಸಮಾಜ ಸೇವೆಯನ್ನು ಪರಿಗಣಿಸಿ ಸಮಾಜಶ್ರೀ ರಾಜ್ಯ ಪ್ರಶಸ್ತಿ ಅಕಾಡೆಮಿ ನೀಡುತ್ತಿದ್ದು, ಮಾ.2ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೂ ಹಲವಾರು ವರ್ಷಗಳ ಕಾಲ ಸಕ್ರಿಯವಾಗಿ ತೊಡಗಿಸಿ ಕೊಂಡು ಮಹಿಳಾ ಕಾಂಗ್ರೆಸ್ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಲ್ಲಿ ಶ್ರಮವಹಿಸಿ ದ್ದರು. ಅಲ್ಲದೆ ವಿಭಿನ್ನ ರೀತಿಯ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು