ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಅಭಿಷೇಕ್ ಜೆ (ಅಭಿ) ಯುವ ಕಾಂಗ್ರೆಸ್ ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವ ಮುಖಂಡ ಅಭಿ ಆರು ಸಾವಿರ ಮತ ಮುನ್ನಡೆಯಿಂದ ಜಯ ಗಳಿಸಿದ್ದಾರೆ.
ಆಯ್ಕೆಗೆ ಸಹಕರಿಸಿ ಮತ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಲಹೆ ಸಹಕಾರದಿಂದ ಪಕ್ಷದ ಸಂಘಟನೆಗೆ ಶಕ್ತಿ ಮೀರಿ ದುಡಿಯುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆ ಗಳು, ಬರಲಿರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೈ ಹಿಡಿಯಲ್ಲಿದೆ ಎಂದರು.