ಮಹಾರಾಷ್ಟ್ರ ಕನ್ನಡಿಗರಿಂದ ಡಾಲು ರವಿಗೆ ಹೃದಯಸ್ಪರ್ಶಿ ಅಭಿನಂದನೆ

ವಿಜಯ ಸಂಘರ್ಷ ನ್ಯೂಸ್ 
ಕೆ.ಆರ್.ಪೇಟೆ: ಮಹಾರಾಷ್ಟ್ರ ರಾಜ್ಯದ ಮುಂಬಯಿ ನಗರ ಕುರುಬರ ಸಂಘದ ಅಧ್ಯಕ್ಷ ಯೋಗಣ್ಣ ಹಾಗೂ ವಡ್ಡರಹಳ್ಳಿ ಬಾಂಬೆ ಸುರೇಶ್ ನೇತೃತ್ವದಲ್ಲಿ ಮನ್ಮುಲ್ ನೂತನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಡಾಲು ರವಿ ರವರನ್ನ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಅಭಿನಂದಿಸಿ ಮಾತನಾಡಿದ ಅಧ್ಯಕ್ಷ ಯೋಗಣ್ಣ ಡಾಲು ರವಿ ಬರಿ ರಾಜಕಾರಣಿಯಲ್ಲ ಒಬ್ಬ ಸರಳ ಸಜ್ಜನಿಕೆಯ ಸಮಾಜ ಸೇವಕ ಅವರ ಸೇವಾ ಮನೋಭಾವನೆ ಮಹಾರಾಷ್ಟ್ರ ದಲ್ಲಿರುವ ಕನ್ನಡಿಗರ ಮೇಲು ನಿರಂತರ ವಾಗಿದೆ. ಏನು ಫಲಾಪೇಕ್ಷೆ ಇಲ್ಲದೆ ಎಲ್ಲರೂ ನಮ್ಮವರು ಎಂಬುವ ವಿಶ್ವಾಸದಲ್ಲಿ ಪ್ರತಿಯೊಬ್ಬರನ್ನು ಗೌರವಿಸಿ ಯಾವುದೇ ಸಂದರ್ಭದಲ್ಲಿ ಮಹಾರಾಷ್ಟ್ರದ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸುವ ಗುಣಕ್ಕೆ ಇಂತಹ ಕಠಿಣ ಪರಿಸ್ಥಿತಿಯಲ್ಲೂ ಮೂರನೇ ಬಾರಿ ಅಧಿಕ ಮತಗಳಿಂದ ಗೆಲವು ಸಾಧಿಸಿ ದ್ದಾರೆ. ಇವರ ಆಡಳಿತ ಅವಧಿಯಲ್ಲಿ ಹಾಲು ಉತ್ಪಾದಕರ ರೈತರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮ ವಹಿಸಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಮುಂಬಯಿ ನಗರದ ಕೆ.ಆರ್.ಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಸುರೇಶ್, ಮಾಕವಳ್ಳಿ ಗ್ರಾಮ ಪಂಚಾಯತಿ ಸದಸ್ಯ ಮಂಜುನಾಥ್, ಸತೀಶ್,ಎಪಿಎಂಸಿ ಮಾಜಿ ಸದಸ್ಯ ಸ್ವಾಮಿಗೌಡ,ಕುಮಾರ್,ರವಿಕುಮಾರ್, ಶ್ರೀನಿವಾಸ್,ಆಟೋ ಶಿವಣ್ಣ ಸೇರಿದಂತೆ ಇನ್ನಿತರರಿದ್ದರು.

(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು