ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಅರಣ್ಯ ಇಲಾಖೆ ವತಿಯಿಂದ ರೈತರನ್ನು ಒಕ್ಕಲೆಬ್ಬಿಸು ವುದನ್ನು ವಿರೋಧಿಸಿ ಜಾತ್ಯತೀತ ಜನತಾದಳ, ಬಿಜೆಪಿ,ರಾಜ್ಯ ರೈತ ಸಂಘ ವತಿಯಿಂದ ಉಪ ಅರಣ್ಯ ಸಂರಕ್ಷಣಾ ಧಿಕಾರಿಗಳ ಕಛೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬಗರ್ ಹುಕುಂ ಸಾಗುವಳಿ ರೈತರು ಮತ್ತು ಶರಾವತಿ ಮುಳುಗಡೆಯಿಂದ ಸ್ಥಳಾಂತರ ಗೊಂಡ ಸಂತ್ರಸ್ತ ರೈತರು ಸುಮಾರು 60-70 ವರ್ಷಗಳಿಂದ ಸಾಗುವಳಿ ಮಾಡಿಕೊಂಡು 1970 ರಿಂದ 2018ರವರೆಗೂ ನಮೂನೆ 50,53 ರಲ್ಲಿ ಅರ್ಜಿಯನ್ನ ಸಲ್ಲಿಸಿದ ಅರ್ಜಿಗಳನ್ನ ಪರಿಶೀಲಿಸಿ ಬಗುರ್ ಹುಕುಂ ಸಮಿತಿಯಿಂದ ಹಕ್ಕುಪತ್ರ ಮಂಜೂರಾಗಿದ್ದು ಈ ಹಕ್ಕು ಪತ್ರವನ್ನ ಮಾನ್ಯತೆ ಮಾಡದೆ ತಿರಸ್ಕಾರ ಮಾಡಿದ್ದಾರೆಂದು ಪ್ರತಿಭಟನಾ ಕಾರರು ಆರೋಪಿಸಿದರು.
ಸರ್ವೋಚ್ಚ ನ್ಯಾಯಾಲಯವೇ ರೈತರಿಗೆ ಯಾವುದೇ ತೊಂದರೆ ಕೊಡಬಾರದು ಎಂದು ಹೇಳಿದೆ. 50 ವರ್ಷಗಳಿಂದ ಸುಮ್ಮನೆ ಇದ್ದು, ಇದೀಗ ಏಕಾಏಕಿ ನೋಟಿಸ್ ನೀಡುವ ಮೂಲಕ ಒಕ್ಕಲೆಬ್ಬಿಸಲು ಯತ್ನಿಸುತ್ತಿರು ವುದು ಸರಿಯಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಾಣ ಕುರುಡುತನಕ್ಕೆ ರೈತರೇ ತಕ್ಕ ಪಾಠ ಕಲಿಸಲಿದ್ದಾರೆ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯುವ ಮೂಲಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್ಯಾನಾಯ್ಕ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸದಸ್ಯ ರುದ್ರೇಗೌಡ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್. ಆರ್. ಬಸವರಾಜಪ್ಪ, ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ನಗರ ಅಧ್ಯಕ್ಷ ಆರ್. ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಮುಖಂಡರಾದ ಟಿ. ಚಂದ್ರೇಗೌಡ, ಸುರೇಶ್, ಜಯರಾಮ್, ಡಿ. ಆನಂದ್, ಎಂ.ಎ ಅಜಿತ್, ಗೊಂದಿ ಜಯರಾಮ್, ಬಿಜೆಪಿ ಮುಖಂಡ ಧರ್ಮಪ್ರಸಾದ್, ಮಂಗೋಟೆ ರುದ್ರೇಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿ ಗಳು, ಮುಖಂಡರು, ಕಾರ್ಯಕರ್ತರು, ರೈತರು, ಕೃಷಿ ಕೂಲಿ ಕಾರ್ಮಿಕರು, ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು, ಮಹಿಳೆಯರು, ಮುಖಂಡರು, ಅಭಿಮಾನಿಗಳು ಪಾಲ್ಗೊಂಡಿದ್ದರು.