ಏ.30 ರವರೆಗೆ ಜೋಗ ವೀಕ್ಷಣೆಗೆ ಪ್ರವೇಶ ನಿಷೇಧ ಏಕೆ..?

ವಿಜಯ ಸಂಘರ್ಷ ನ್ಯೂಸ್ 
ಸಾಗರ: ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿ ಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

 ಮಾ.15 ರ ವೇಳೆಗೂ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಪೂರ್ಣಗೊಳ್ಳದ ಕಾರಣ ಏ.30 ರವರೆಗೆ ಮುಚ್ಚಲಾಗಿದೆ.

ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸಬೇಕೆಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು