ಭದ್ರಾವತಿ-ಆನೆ ಇಳಿದು ಕೈ ಹಿಡಿದ ರಹಮತ್ ಉಲ್ಲಖಾನ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಹಲವಾರು ವರ್ಷಗಳಿಂದ ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದ ನಗರದ ರಹಮತ್ ಉಲ್ಲಖಾನ್ ರವರು ಶನಿವಾರ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು. 

ಮಾಧ್ಯಮಗಳೊಂದಿಗೆ ಮಾತನಾಡಿದ ರಹಮತ್ ಉಲ್ಲಖಾನ್, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಉತ್ತಮ ಅಭಿವೃದ್ಧಿ ಕಾರ್ಯ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ್ ರವರ ಸಾಧನೆ ಮೆಚ್ಚಿ ಪಕ್ಷ ಸೇರ್ಪಡೆಗೊಂಡಿರು ವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಎಸ್ ಕುಮಾರ್, ನಗರಸಭಾ ಸದಸ್ಯರಾದ ಬಿ.ಕೆ. ಮೋಹನ್, ವಿ.ಕದರೇಶ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಬರಮಾಡಿ ಕೊಂಡರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು