ಭದ್ರಾವತಿ-ಎಂಪಿಎಂ ಕಾರ್ಖಾನೆ ಪುನ‌ರ್ ಆರಂಭಕ್ಕೆ ಬದ್ದ:ಸಚಿವ ಮಧು ಬಂಗಾರಪ್ಪ

ವಿಜಯ ಸಂಘರ್ಷ 
ಭದ್ರಾವತಿ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ತಾವು ಬದ್ಧರಿದ್ದು, ನಗರದ ಮೈಸೂರು ಕಾಗದ ಕಾರ್ಖಾನೆ ಪುನ‌ರ್ ಆರಂಭಿಸುವ ಸಂಬಂಧ ಶಾಸಕರು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಅವರೊಂದಿಗೆ ನಾನು ಸಹ ಕೈಜೋಡಿ ಸುತ್ತೇನೆ. ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾನುವಾರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಂಬರುವ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ನಗರದ ಕೋಡಿಹಳ್ಳಿ ರಸ್ತೆಯಲ್ಲಿರುವ ದೈವಜ್ಞ ಕಲ್ಯಾಣ ಮಂಟಪ ದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಗ‌ರ್ ಹುಕುಂ ಸಾಗುವಳಿದಾರರಿಗೆ ನೀಡಿರುವ ನೋಟಿಸ್‌ನಿಂದ ಯಾರು ಸಹ ಭಯಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಎದುರಾಗಿರುವ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.

ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್ ಕೊಡಲು ಸಾಧ್ಯ ವಿಲ್ಲ. ಪಕ್ಷ ಯಾರನ್ನು ಆಯ್ಕೆ ಮಾಡುತ್ತವೆಯೋ ಅವರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸ ಬೇಕು. ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಅವುಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ಕುರಿತು ಮನವರಿಕೆ ಮಾಡಿಕೊಡಬೇಕೆಂದರು.

ಪಕ್ಷದ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನಕುಮಾ‌ರ್ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಆದೇಶದಂತೆ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ತಾಲೂಕು ಹಾಗು ಜಿಲ್ಲೆಗಳಲ್ಲಿ ಕಾರ್ಯಕರ್ತರ ಸಭೆ ಆಯೋಜಿಸ ಲಾಗುತ್ತಿದೆ. ಕ್ಷೇತ್ರದಲ್ಲಿ ಈಗಾಗಲೇ ನಗರಸಭೆ ಆಡಳಿತ ಕಾಂಗ್ರೆಸ್ ಪಕ್ಷದಲ್ಲಿದ್ದು, ಶಾಸಕರ ನೇತೃತ್ವದಲ್ಲಿ ಪಕ್ಷ ಹೆಚ್ಚು ಕ್ರಿಯಾಶೀಲವಾಗಿದೆ. 

ಈ ಹಿನ್ನಲೆಯಲ್ಲಿ ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ವಿಧಾನಪರಿಷತ್ ಸದಸ್ಯೆ ಬಲ್ಕಿಶ್ ಬಾನು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್,  ಸದಸ್ಯ ರಾದ ಬಿ.ಕೆ ಮೋಹನ್, ವಿ. ಕದಿರೇಶ್, ಶಶಿಕಲಾ ನಾರಾಯಣಪ್ಪ, ಬಿ.ಟಿ ನಾಗರಾಜ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಚಂದ್ರಭೂಪಾಲ, ವೈ. ರೇಣುಕಮ್ಮ,  ಬಿ.ಕೆ ಶಿವಕುಮಾರ್, ಸಿ.ಎಂ ಖಾದರ್, ಎಸ್. ಮಣಿಶೇಖರ್, ಬಿ.ಎಸ್ ಗಣೇಶ್, ಸುಕನ್ಯ ದಶರಥಗಿರಿ, ಎಚ್. ರವಿಕುಮಾ‌ರ್,  ಅಮೀರ್ ಜಾನ್, ಗಂಗಾಧರ್, ಎಂ. ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.

4 ಕಾಮೆಂಟ್‌ಗಳು

ನವೀನ ಹಳೆಯದು