ವಿಜಯ ಸಂಘರ್ಷ
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ತೆರಳಿದ ಯುವಕನೋರ್ವ, ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಜಿಗಳಗೋಡು ಗ್ರಾಮದ ಜಿಟ್ಟಿಕೊಪ್ಪ ಮೂಲದ ಕಿರಣ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.ಕಿರಣ್ ತನ್ನ ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಾಡಲು ತೆರಳಿದ್ದ. ಈಜಾಡುವ ವೇಳೆ ನೀರಿನ ಸುಳಿಯಲ್ಲಿ ಸಿಲುಕಿ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಸ್ಥಳಕ್ಕೆ ತೀರ್ಥಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.