ವಿಜಯ ಸಂಘರ್ಷ
ಭದ್ರಾವತಿ: ಉತ್ತಮ ನಟನೆ ಹಾಗೂ ಸಮಾಜಸೇವೆ ಮೂಲಕ ಪ್ರತಿಯೊಬ್ಬ ಕನ್ನಡಿಗರ ಮನೆ-ಮನಗೆದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಸ್ಥಳೀಯ ಶಾಸಕ ಬಿ.ಕೆ. ಸಂಗಮೇಶ್ ನೇತೃತ್ವದಲ್ಲಿ ಮಾ.17ರ ನಾಳೆ ಬೆಳಿಗ್ಗೆ 10.30ಕ್ಕೆ ಹಳೇನಗರದ ನಿರ್ಮಲಾ ಆಸ್ಪತ್ರೆ ಮುಂಭಾಗ ಕನಕ ಆಟೋ ನಿಲ್ದಾಣದ ಬಳಿ ಪುನೀತ್ ರಾಜ್‌ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಸಿಹಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಂತರ 11 ಗಂಟೆಗೆ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು-ಹಣ್ಣು- ಬ್ರೆಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿ ಕೊಂಡಿದ್ದಾರೆ.