ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದು ಅತ್ಯುತ್ತಮ ಅಂಕಗಳಿಸಿ: ಪ್ರಶಾಂತ್

ವಿಜಯ ಸಂಘರ್ಷ ನ್ಯೂಸ್ 

ಭದ್ರಾವತಿ: ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಳು ಉತ್ತಮವಾಗಿ ಬರೆದು ಅತ್ಯುತ್ತಮ ಅಂಕಗಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಖಜಾಂಚಿ ಪ್ರಶಾಂತ್ ಕರೆ ನೀಡಿದರು.

ಸೋಮವಾರ ವಿದ್ಯಾ ಸಂಸ್ಥೆಯಲ್ಲಿ ಪ್ರತಿವರ್ಷದ ಸಂಪ್ರದಾಯದಂತೆ ಈ ವರ್ಷವೂ ಸಹ ಪರೀಕ್ಷೆಗಳು ಸನ್ನಿಹಿತವಾದ ಕಾರಣ ವಿದ್ಯೆಗೆ ಅಧಿ ದೇವತೆ ಶಾರದೆಯನ್ನು ಆರಾಧಿಸುವ ಸಲುವಾಗಿ "ಶಾರದಾ ಪೂಜೆ "  ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಗಳು ಹಾಗೂ ಬಿ.ಇಡಿ ವಿಭಾಗದ ಪ್ರಾಂಶುಪಾಲ ಡಾ.ಎಸ್.ಪಿ.ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 ಸಂಸ್ಥೆಯ ಕನ್ನಡ ಹಾಗು ಆಂಗ್ಲ ವಿಭಾಗಗಳ ಪ್ರೌಢ, ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಬಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿ ಗಳು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು