ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಸರ್ಕಾರ ಗ್ರಾಮೀಣ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಜಾರಿಗೆ ತಂದಿರುವುದು ಉತ್ತಮ ಕಾರ್ಯಕ್ರಮವಾಗಿದ್ದು ಇದರ ಪೂರ್ಣ ಸದುಪಯೋಗ ಪಡೆದು ಕೊಳ್ಳುವಂತೆ ಯರೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾ ಧ್ಯಾಯ ಕೋಗಲೂರು ತಿಪ್ಪೇಸ್ವಾಮಿ ಕರೆ ನೀಡಿದರು.
ತಾಲ್ಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಉಪೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಕಾರ್ಯ ವೈಖರಿ ಮತ್ತು ಯೋಜನೆಗಳ ಬಗ್ಗೆ ಶಾಲೆಯ ಶಿಕ್ಷಕರ ಸಹಕಾರದಿಂದ ಉತ್ತಮ ಕಾರ್ಯಕ್ರಮ ನಡೆಯುತ್ತಿದೆ. ಗ್ರಾಮೀಣ ಮಕ್ಕಳಿಗೆ ಈ ರೀತಿಯ ಶಿಬಿರಗಳು ಉಪಯುಕ್ತವಾಗಿದ್ದು ಯರೇಹಳ್ಳಿ ಗ್ರಂಥಪಾಲಕರಿಂದ ಉತ್ತಮ ಕಾರ್ಯಕ್ರಮ ಹಾಗೂ ಗ್ರಂಥಾಲಯದ ಉತ್ತಮ ಮಾಹಿತಿ ದೊರೆಯುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಲತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರ್, ಕಾರ್ಯದರ್ಶಿ ಲಕ್ಷ್ಮೀಕಾಂತ್, ಸಾಹಿತಿ ಬಸವರಾಜಪ್ಪ ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳು ಮಕ್ಕಳು ಪೋಷಕರು ಗ್ರಾಮಸ್ಥರು ಭಾಗವಹಿಸಿದ್ದರು.