ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್(ಎಚ್.ಕೆ ಜಂಕ್ಷನ್)ನಲ್ಲಿ ಗೃಹಿಣಿ ಯೋರ್ವಳು ಮೃತಪಟ್ಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಶ್ವಿನಿ ಅಲಿಯಾಸ್ ತೇಜಸ್ವಿನಿ(28) ಎಂಬ ಗೃಹಿಣಿಯ ಮೃತದೇಹ ಅವರ ಮನೆಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯ ಪತಿ, ಅತ್ತೆ ಮತ್ತು ಮಾವನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಕೊಳ್ಳ ಲಾಗಿದೆ. ದೂರಿನ ಹಿನ್ನಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತಿ ಪ್ರಮೋದ್ ಮತ್ತು ಇವರ ತಂದೆಯನ್ನು ಬಂಧಿಸಿದ್ದಾರೆ. ಘಟನೆ ಸ್ಥಳದಲ್ಲಿ ಪ್ರಮೋದ್ ತಾಯಿ ಇಲ್ಲದಿರುವ ಹಿನ್ನಲೆಯಲ್ಲಿ ಅವರನ್ನು ಇನ್ನೂ ಬಂಧಿಸಿಲ್ಲ.
ಅಶ್ವಿನಿ ಮತ್ತು ಪ್ರಮೋದ್ ಸುಮಾರು 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ನಡುವೆ ಮೊದಲಿನಿಂದಲೂ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗುತ್ತಿದ್ದು, ಈ ಹಿನ್ನಲೆಯಲ್ಲಿ ಅಶ್ವಿನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆ ಮಾಡಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗುವಂತೆ ಮಾಡಲಾಗಿದೆ ಎಂದು ಆರೋಪಿಸಿ ಅಶ್ವಿನಿ ತವರು ಮನೆಯವರು ದೂರು ನೀಡಿದ್ದಾರೆ.
ದೂರಿನ ಹಿನ್ನಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತಿ ಪ್ರಮೋದ್ ಮತ್ತು ಇವರ ತಂದೆ ಯನ್ನು ಬಂಧಿಸಿದ್ದಾರೆ.
ಈ ನಡುವೆ ಶನಿವಾರ ಹುಣಸೆಕಟ್ಟೆ ಜಂಕ್ಷನ್ ರಸ್ತೆಯಲ್ಲಿ ಅಶ್ವಿನಿ ಮೃತದೇಹ ವಿಟ್ಟು ಪ್ರತಿಭಟನೆ ನಡೆಸುವ ಮೂಲಕ ಪತಿ ಆಸ್ತಿಯಲ್ಲಿ ಮಕ್ಕಳಿಗೆ ಪಾಲು ನೀಡಬೇಕು. ಅಲ್ಲದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ನ್ಯಾಯ ಒದಗಿಸಿಕೊಡ ಬೇಕೆಂದು ಆಗ್ರಹಿಸಲಾಗಿದೆ.