ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸ ಲಾಗಿದೆ. ಆದರೂ ಮೈಕ್ರೋ ಫೈನಾನ್ಸ್ ಕಿರುಕುಳ ಮಾತ್ರ ತಪ್ಪಿಲ್ಲ.

ತಾಲ್ಲೂಕಿನ ಹೊಳೆಹೊನ್ನೂರು ವ್ಯಾಪ್ತಿಯ ದಾಸರಕಲ್ಲಹಳ್ಳಿ ವಾಸಿ ಅಬ್ದುಲ್ ಸತ್ತಾರ್ (60) ಎಂಬ ವ್ಯಕ್ತಿ ಮೈಕ್ರೋ ಫೈನಾನ್ಸ್ ಹಾವಳಿಗೆ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ. 

ಒಂದೂವರೆ ವರ್ಷಗಳ ಹಿಂದೆ ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದಿದ್ದರು. ಈ ಹಿಂದಿನ ಕಂತುಗಳನ್ನು ಕಟ್ಟಿದ್ದು ಮಾರ್ಚ್ ತಿಂಗಳ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

ಫೈನಾನ್ಸ್ ನವರಿಂದ ಪ್ರತಿದಿನ ಸಾಲದ ಕಂತಿನ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಇದೇ ಕಿರುಕುಳಕ್ಕೆ ಬೇಸತ್ತೆ ಅಬ್ದಲ್ ಸುತ್ತಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾ ಗುತ್ತಿದೆ.

 ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು