ವಿಜಯ ಸಂಘರ್ಷ
ಭದ್ರಾವತಿ: ನಗರಸಭಾ ವ್ಯಾಪ್ತಿಯಲ್ಲಿ ಏ: 6 ರ ಶ್ರೀರಾಮ ನವಮಿ ಹಬ್ಬ, ಏ.10 ರಂದು ಮಹಾವೀರ ಜಯಂತಿ ಹಾಗೂ ಏ: 14 ರ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಕುರಿತಂತೆ ನಗರಸಭೆ ಪೌರಾಯುಕ್ತರು ಏ. 4 ರಂದು ಪ್ರಕಟಣೆ ಬಿಡುಗಡೆ ಮಾಡಿ, ಮಾಂಸ ಮಾರಾಟ ಮಾಲೀಕರು ತಮ್ಮ ಉದ್ದಿಮೆಯನ್ನು ಮೂರು ದಿನ ಬಂದ್ ಮಾಡಿ ಸಹಕರಿಸ ಬೇಕು ಎಂದು ತಿಳಿಸಿದ್ದಾರೆ.
ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.