ವಿಜಯ ಸಂಘರ್ಷ
ಭದ್ರಾವತಿ: ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಭದ್ರಾವತಿ ನಗರಕ್ಕೆ, ಏ. 5 ರ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.
ಇತ್ತೀಚೆಗೆ ತಾಲೂಕಿನ ಹಲವೆಡೆ ಚದುರಿ ದಂತೆ ಬೇಸಿಗೆ ಮಳೆಯಾದರೂ, ನಗರದಲ್ಲಿ ಮಳೆಯಾಗಿರಲಿಲ್ಲ. ಮತ್ತೊಂದೆಡೆ, ನಗರದಲ್ಲಿ ಬಿಸಿಲ ಬೇಗೆ ಹೆಚ್ಚಾಗಿತ್ತು. ತಾಪಮಾನದ ಪ್ರಮಾಣ 35 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ಮಟ್ಟದಲ್ಲಿ ದಾಖಲಾಗುತ್ತಿತ್ತು.
ಸಂಜೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಗರದಲ್ಲಿ ಉತ್ತಮ ಮಳೆ ಯಾಯಿತು. ಇದರಿಂದ ನಾಗರೀಕರು ನಿಟ್ಟುಸಿರು ಬಿಡುವಂತಾಯಿತು.
ನಗರ ಮಾತ್ರವಲ್ಲದೆ ತಾಲೂಕಿನ ಹಲವು ಗ್ರಾಮಗಳಲ್ಲಿಯೂ ಸಂಜೆ ಮಳೆಯಾದ ವರದಿಗಳು ಬಂದಿವೆ.
ಮಳೆ ಮುನ್ಸೂಚನೆ: ಬಂಗಾಳ ಕೊಲ್ಲಿ ಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕೆಲ ದಿನ ಗಳವರೆಗೆ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Tags
ಭದ್ರಾವತಿ ಮಳೆವರದಿ