ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಉತ್ತಮ ಬದುಕು ನಿರ್ಮಾಣ ಮಾಡಿಗೊಳ್ಳುವ ಆಶಯ ದೊಂದಿಗೆ ಸದೃಢ ಸಮಾಜಕ್ಕೆ ಅಗತ್ಯ ವಿರುವ ಸಂವಿಧಾನವನ್ನು ಡಾ:ಅಂಬೇಡ್ಕರ್ ರವರು ನೀಡಿದ್ದಾರೆ. ಅದನ್ನು ಅರ್ಥಮಾಡಿ ಕೊಂಡಾಗ ಅವರ ಜಯಂತಿ ಆಚರಣೆ ಸಾರ್ಥಕ ವಾಗುತ್ತದೆ ಎಂದು ಬೆಂಗಳೂರಿನ ಬೌದ್ಧ ಭಿಕ್ಕು ನ್ಯಾನಲೋಕ ಬಂತೇಜಿ ಹೇಳಿದರು.
ಸೋಮವಾರ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗು ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ರವರ 134ನೇ ಹಾಗು ಡಾ.ಬಾಬು ಜಗಜೀವನ್ ರಾಮ್‌ರವರ 118 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಪ್ರತಿಜ್ಞಾವಿಧಿ ಭೋಧಿಸಿದರು.
ದೇವರ ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಡಿ.ಎಚ್ ನಾಗರಾಜ್ ಮಾತನಾಡಿ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ರವರು ತಾವು ಅನುಭವಿಸಿದ ನೋವುಗಳನ್ನು ಭವಿಷ್ಯದಲ್ಲಿ ಶೋಷಿತ ಸಮುದಾಯದ ಯಾರು ಸಹ ಅನುಭವಿಸಬಾರದು ಎಂಬ ಆಶಯದೊಂದಿಗೆ ಅಸಮಾನತೆ ವಿರುದ್ಧ ಹೋರಾಟ ನಡೆಸಿದರು. ಅಲ್ಲದೆ ಒಬ್ಬ ಸಮರ್ಥ ಆಡಳಿತಗಾರ ನಾಗಿ ಹಲವು ಸುಧಾರಣೆಗಳನ್ನು ಜಾರಿಗೆ ತಂದರು. ಇಂತಹ ಮಹಾನ್ ವ್ಯಕ್ತಿ ಜಯಂತಿ ಆಚರಣೆ ಕೇವಲ ಆಚರಣೆಯಾಗಿ ಉಳಿಯಬಾರದು ಎಂದರು.
ನಗರಸಭೆ ಸದಸ್ಯ ಬಿ.ಕೆ.ಮೋಹನ್ ಮಾತನಾಡಿ, ಈ ಬಾರಿ ಇಬ್ಬರು ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾರಾಜ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್.ಗೋಪಾಲ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಎಂ.ಗಂಗಣ್ಣ, ಡಿವೈಎಸ್ ಪಿ, ಕೆ.ಆರ್ ನಾಗರಾಜು, ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್, ನಗರಸಭೆ ಸದಸ್ಯರು, ದಲಿತ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಸಂಘ-ಸಂಸ್ಥೆ ಗಳ ಪ್ರಮುಖರು ಇನ್ನಿತರರಿದ್ದರು.
ಬಿ ಇ ಓ, ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರೆ, ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರು ಪ್ರಾರ್ಥಿಸಿದರು.
ಇದೆ ಸಂದರ್ಭದಲ್ಲಿ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಸಲ್ಲಿಸಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬಿ.ಎಚ್ ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.