ಪೋಪ್ ಫ್ರಾನ್ಸಿಸ್‌ರವರ ನಿಧನಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಸಂತಾಪ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ರೋಮನ್ ಕ್ಯಾಥೋಲಿಕ್ ಧರ್ಮಸಭೆಯ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರ ನಿಧನಕ್ಕೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.

ಜಗದ್ಗುರುಗಳು ಸೋಮವಾರ ಬೆಳಗ್ಗೆ ಈ ಲೋಕದ ಯಾತ್ರೆ ಮುಗಿಸಿ. ದೇವರ ಪಾದಗಳಿಗೆ ಸೇರಿರುವ ವಿಷಯ ಕೇಳಿ ಮನಸ್ಸಿಗೆ ತುಂಬಾ ದುಃಖ ಮತ್ತು ನೋವು ಉಂಟು ಮಾಡಿದೆ.

ಜಗದ್ಗುರುಗಳ ಸಿನೋಡಿಯಲ್ ಅಂದರೆ ಎಲ್ಲರೂ ಜೊತೆಯಾಗಿ ನಡೆಯೋಣ ಮತ್ತು ಒಬ್ಬರನ್ನು ಒಬ್ಬರು ಗೌರವದಿಂದ ಆಲಿಸೋಣ ಎಂಬ ಕರೆ ನಿಜವಾಗಲೂ ವಿಶ್ವಕ್ಕೆ ಪ್ರೀತಿ ಯಿಂದ ಶಾಂತಿಯ ಪ್ರಯಾಸಕ್ಕೆ ಮುನ್ನುಡಿ ಬರೆದಂತಿತ್ತು. ಇವರ ಅಗಲಿಕೆಯಿಂದ ಇಡೀ ಮಾನವ ಕುಲಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಸಮಸ್ತ ಕ್ರೈಸ್ತ ಬಾಂಧವರಿಗೆ ಆಧಾರಣೆ ಮತ್ತು ಧೈರ್ಯ ಕೊಡಲಿ ಎಂದು ಪ್ರಾರ್ಥಿಸುತ್ತಾ ಸಂತಾಪ ಸೂಚಿಸುತ್ತೇನೆ ಎಂದು ಶಾಸಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು