ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕನ್ನಡದ ತೇರೆಳೆಯಲು ಸದಾಕಾಲ ಶ್ರಮಿಸುತ್ತಿರುವ ನಾವು ಪ್ರಸ್ತುತ ಜವಾಬ್ದಾರಿ ಹೆಚ್ಚಿರುವುದರಿಂದ ಮತ್ತಷ್ಟು ಆಸಕ್ತಿ ವಹಿಸಿ ಪ್ರಾಮಾಣಿಕ ವಾಗಿ ಯಾವುದೇ ಲೋಪ ದೋಷ ಗಳಿಲ್ಲದೆ ಎಲ್ಲರ ಸಹಕಾರ ಪಡೆದು ವಿಭಿನ್ನ ಕಾರ್ಯಕ್ರಮಗಳ ಮಾಡುವ ಮೂಲಕ ಕನ್ನಡದ ಸೇವೆ ಮಾಡುವು ದಾಗಿ ಕಸಾಪ ನೂತನ ಅಧ್ಯಕ್ಷ ಹೆಚ್.ತಿಮ್ಮಪ್ಪ ಹೇಳಿದರು.
ಅವರು ನ್ಯೂಟೌನ್ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನಡೆದ ಸಭೆ ಯಲ್ಲಿ ನಿರ್ಗಮಿತ ಅಧ್ಯಕ್ಷ ಕೂಡ್ಲು ಯಜ್ಞಯ್ಯ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಒಡಂಬಡಿಕೆ ಯಂತೆ ಪರಿಷತ್ತಿನ 5 ವರ್ಷಗಳ ಅವಧಿಯ 3 ನೇಯ ಮತ್ತು ಕಡೇಯ ಅಧ್ಯಕ್ಷ ಸ್ಥಾನವನ್ನು ಅಲಂಕರಿ ಸಿದ್ದೇನೆ. ಕಸಾಪದಲ್ಲಿ ಹತ್ತಾರು ವರ್ಷ ಗಳಿಂದ ಸೇವೆ ಮಾಡಿಕೊಂಡು ಬಂದಿರುವ ನಾವು ಪ್ರಸ್ತುತ ಕಸಾಪ ಗೌರವ ಕಾರ್ಯದರ್ಶಿಯಾಗಿದ್ದು ಕೊಟ್ಟ ಮಾತಿನಂತೆ ಜಿಲ್ಲಾಧ್ಯಕ್ಷರು ನೇಮಕ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿ ದ್ದಾರೆ. ಮುಂದಿನ ದಿನಗಳಲ್ಲಿ ಮಾಡುವ ಕನ್ನಡದ ಕೆಲಸಗಳಿಗೆ ಎಲ್ಲರ ಸಹಕಾರ ಬೇಕಾಗಿದೆ ಎಂದರು.
ನಿರ್ಗಮಿತ ಅಧ್ಯಕ್ಷ ಕೂಡ್ಲುಯಜ್ಞಯ್ಯ ನೂತನ ಅಧ್ಯಕ್ಷರಿಗೆ ಕಸಾಪ ಬಾವುಟ ಹಸ್ತಾಂತರ ಮಾಡಿ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಸರ್ವರೂ ನೀಡಿದ ಸಹಕಾರ ಅಮೂಲ್ಯವಾದದ್ದು. ಮುಂದಿನ ದಿನಗಳಲ್ಲಿ ನಡೆಯುವ ಕನ್ನಡದ ತೇರೆಯುವ ಕಾರ್ಯಕ್ಕೆ ಸದಾ-ಕಾಲ ಸಹಕರಿಸುವುದಾಗಿ ಹೇಳಿ ಕೃತಜ್ಞತೆ ಸಲ್ಲಿಸಿದರು.
ಖಜಾಂಚಿ ಪ್ರಸನ್ನಕುಮಾರ್ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆದರು. ತಿಮ್ಮಪ್ಪ ವರದಿ ಮಂಡಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಸ್ವಾಮಿ, ಹೊಳೆಹೊನ್ನೂರು ಹೋಬಳಿ ಅಧ್ಯಕ್ಷ ಚೆನ್ನಪ್ಪ, ಮುಖಂಡರು ಗಳಾದ ನಾಗೋಜಿರಾವ್,ಪಶಾಂತ್, ಕಮಲಾ ಕರ್, ಎಂ.ಎಸ್.ಸುಧಾಮಣಿ, ತಿಪ್ಪಮ್ಮ, ಪ್ರಕಾಶ್ ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಕಾರ್ಯದರ್ಶಿ ಎಂ.ಇ. ಜಗದೀಶ್ ನಿರೂಪಿಸಿದರೆ, ಪ್ರಸನ್ನ ಕುಮಾರ್ ಸ್ವಾಗತಿಸಿ, ಮೋಹನ್ ವಂದಿಸಿದರು.