ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಅಧ್ಯಕ್ಷ ಎಸ್. ಪುಟ್ಟರಾಜು ಹೇಳಿದರು.
ಅವರು ಹಳೆನಗರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ"ನಮ್ಮ ಶಾಲೆ ನಮ್ಮ ಜವಾಬ್ದಾರಿ" ಕಾರ್ಯಕ್ರಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಮಾತನಾಡಿ" ಗುಣ ಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ದಾಖಲಾತಿ ನಮ್ಮ ಹೆಜ್ಜೆ ನಮ್ಮೆಲ್ಲರ ನಡೆ- ಗುಣಾತ್ಮಕ ಶಿಕ್ಷಣದ ಕಡೆಗೆ ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಶಿಕ್ಷಣ ಸಿಗಲಿ ಎಂದು ಹೇಳಿದರು.
ನಗರಸಭಾ ಸದಸ್ಯೆ ಅನುಪಮಾ ಚೆನ್ನೇಶ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಲ್. ಷಡಾಕ್ಷರಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು,
ಅನಿತಾ,ಮುಖ್ಯೋಪಾಧ್ಯಾಯ ಮೋಹಿದೀನ್ ಪೀರ, ಶಿಕ್ಷಕರಾದ ರಶ್ಮಿ, ಬಸವಂತರಾವ್ ದಾಳೆ ಸೇರಿದಂತೆ ಪೋಷಕರು, ಮುಖಂಡರುಗಳು, ಭಾಗವಹಿಸಿದ್ದರು.
Tags
ಭದ್ರಾವತಿ ಸುದ್ದಿ