ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕಿನ ಅರಬಿಳಚಿ ಗ್ರಾಮ ಪಂಚಾಯಿತಿಯಲ್ಲಿ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿತ್ತು.
ಅವರು ಬುಧವಾರ ಅರಬಿಳಚಿ ಗ್ರಾಮ ಪಂಚಾಯಿತಿ ಮುಂಭಾಗ ಹಮ್ಮಿಕೊಳ್ಳ ಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ನಿರ್ಲಕ್ಷ್ಯ ತನದಿಂದ ಅನೇಕ ವರ್ಷ ಗಳಿಂದಲೂ ಗ್ರಾಮದ ಬಡ ಕುಟುಂಬ ಗಳಿಗೆ 100 ದಿನ ಕೆಲಸ ನೀಡದೆ ಮೋಸ ಮಾಡುತ್ತಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ 30-40 ವರ್ಷಗಳಿಂದ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿ ರುವ ಬಡವರಿಗೆ ಇಲ್ಲಿಯವರೆಗೆ ಅವರ ಹೆಸರುಗಳನ್ನು ಪಂಚಾಯಿತಿಯ ರಾಜೀವ್ ಗಾಂಧಿ ನಿಗಮದ ಪಟ್ಟಿ ಯಲ್ಲಿ ಸೇರಿಸದೆ ಮಾನವಹಕ್ಕುಗಳ ಹಾಗೂ ಸಂವಿಧಾನ ಹಕ್ಕುಗಳ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ತಕ್ಷಣ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಿದರು.
ಅರಬಿಳಚಿ ಗ್ರಾಮ ಪಂಚಾಯಿತಿಯಲ್ಲಿ ಕಾನೂನಿನ ಪ್ರಕಾರ ಯಾವುದೇ ಗ್ರಾಮ ಸಭೆ, ಮತ್ತು ವಾರ್ಡ್ ಸಭೆಗಳನ್ನು ಕಾನೂನು ಪ್ರಕಾರ ನಡೆಸದೆ ಸರ್ಕಾರದ ಸೌಲಭ್ಯಗಳು ವಸತಿ ಯೋಜನೆ, ಸಾಲ ಸೌಲಭ್ಯ, ಇನ್ನಿತರೆ ಯಾವುದೇ ಯೋಜನೆಗಳನ್ನು ಗ್ರಾಮದ ಜನರಿಗೆ ಜಾಗೃತಿ ಮೂಡಿಸದೆ ಕೆಲವೇ ಜನರು ಸೌಲಭ್ಯಗಳನ್ನು ಪಡೆಯುತ್ತಿದ್ದು, ನಿಜವಾದ ಬಡವರಿಗೆ ಕಾನೂನಿನ ಅರಿವಿಲ್ಲದೆ. ಜಾಗೃತಿ ಮೂಡಿಸದೆ ಗ್ರಾಮ ಪಂಚಾಯಿತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಈ ಸ್ವತ್ತು, ಖಾತೆ, ಪೌತಿ ಖಾತೆ, ಪಿಂಚಣಿ ಗಳ ಸೌಲಭ್ಯಗಳ ಬಗ್ಗೆ, ಸರ್ಕಾರದ ಅನೇಕ ಸೌಲಭ್ಯಗಳ ಬಗ್ಗೆ ಯಾವುದೇ ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಗೆ ತಿಳಿಯಪಡಿಸದೆ ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಗ್ರಾಮ ಸಭೆಗೆ ಕರೆಯದೆ ನಿರ್ಲಕ್ಷ್ಯ ವಹಿಸುತ್ತಿರುವುದು, ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಉಲ್ಲಂಘನೆ ಆಗಿರುತ್ತದೆ.
ಪಂಚಾಯಿತಿಯ ವ್ಯಾಪ್ತಿಯಲ್ಲಿ ಹೆಚ್ಚು ಪರಿಶಿಷ್ಟ ಜಾತಿಯ ಬಡವರು ವಾಸಿಸುತ್ತಿದ್ದು, ಅನೇಕ ವರ್ಷ ಗಳಿಂದಲೂ ಇವರಿಗೆ ಇವರ ಮಕ್ಕಳಿಗೆ ಜಾತಿ ಪ್ರಮಾಣಪತ್ರ ನೀಡದೆ, ವಿದ್ಯಾಭ್ಯಾಸಕ್ಕೆ ಮತ್ತು ಸರ್ಕಾರಿ ಕೆಲಸಗಳಿಗೆ, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗಿದ್ದು, ಮಾನವಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಉಲ್ಲಂಘನೆ ಯಾಗಿರುತ್ತದೆ ಎಂದು ಕಿಡಿಕಾರಿದರು.
ಗ್ರಾಮಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸದೆ ನಿರ್ಲಕ್ಷ್ಯವಹಿಸಿರುವುದು ಖಂಡನೀಯ. ಈ ಹಿನ್ನಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಹಾಗೂ ಆಟ್ರಾಸಿಟಿ ದೂರು ದಾಖಲಿ ಸುವ ಕುರಿತು ಮುಂಜಾಗ್ರತೆ ಯಾಗಿ ಎಚ್ಚರಿಕೆ ನೀಡಿದರು.