ಭದ್ರಾವತಿ-ಸಿ.ಎಂ.ರಮೇಶ್ ಗೆ ಒಲಿದ ಅತ್ಯುತ್ತಮ ಸೇವಾ ಪ್ರಶಸ್ತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲೂಕಿನ ಹುಣಸೇಕಟ್ಟೆ (ಜಂಕ್ಷನ್) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಚಾರಕ ಸಿ.ಎಂ ರಮೇಶ್ ಅವರ ಅತ್ಯುತ್ತಮ ಸೇವೆ ಸ್ಮರಿಸಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವಿದ್ಯಾರ್ಥಿ ನಿಲಯದ ಎಲ್ಲಾ ಎಂಟು ಮಂದಿ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣ ರಾಗಲು ರಮೇಶ್‌ರವರು ಸಕಾಲದಲ್ಲಿ ಕೈಗೊಂಡ ಕ್ರಮ ಮತ್ತು ಶ್ರಮ ಹೆಚ್ಚಿನ ದ್ದಾಗಿದೆ. ಈ ಹಿನ್ನಲೆಯಲ್ಲಿ ಇವರನ್ನು ಶಿವಮೊಗ್ಗ ಅಂಬೇಡ್ಕ‌ರ್ ಭವನದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರ ಮತ್ತು ಅಡುಗೆ ಸಿಬ್ಬಂದಿಗಳ ಎರಡು ದಿನಗಳ ವಿಶೇಷ ಪುನಶ್ವೇತನ ಕಾರ್ಯಾಗಾರ ದಲ್ಲಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರಿನ ಉಪ ನಿರ್ದೇಶಕಿ ಭವ್ಯ, ಜಿಲ್ಲಾ ಅಧಿಕಾರಿ ಶೋಭಾ, ಆಹಾರ ಇಲಾಖೆಯ ಉಪ ನಿರ್ದೇಶಕ ಹವೀನ್, ತಾಲೂಕು ಕಲ್ಯಾಣಾಧಿಕಾರಿ ಕೆ.ಎಸ್ ಶೈಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು