ಭದ್ರಾವತಿ-ಹಿರಿಯ ಪತ್ರಕರ್ತ ಎಲ್. ಆನಂದರಾಮನ್ ನಿಧನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಹಿರಿಯ ಪತ್ರಕರ್ತ ಎಲ್. ಆನಂದರಾಮನ್(71) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.ಪತ್ನಿ ಮಂಜುಳಾ, ಪುತ್ರಿಯರಾದ ರಕ್ಷಾ ಮತ್ತು ರಶ್ಮಿ ಹಾಗು ಅಳಿಯಂದಿರು, ಮೊಮ್ಮಕ್ಕಳು ಇದ್ದಾರೆ. ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ಪತ್ರಿಕಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದರು. 

ಕನ್ನಡಪ್ರಭ ಮತ್ತು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ದಿನ ಪತ್ರಿಕೆಗಳ ವರದಿಗಾರ ರಾಗಿ ದೀರ್ಘಾವಧಿ ಸೇವೆಲ್ಲಿಸಿದ್ದರು. ಪತ್ರಕರ್ತರ ಸಂಘದ ತಾಲೂಕು ಶಾಖೆಯ ಉಪಾಧ್ಯಕ್ಷರಾಗಿ, ಖಜಾಂಚಿ ಯಾಗಿ ಸೇವೆ ಸಲ್ಲಿಸಿದ್ದರು.

ಅಲ್ಲದೆ ಆನಂದರಾಮನ್‌ರವರು ಕ್ರಿಕೆಟ್ ತರಬೇತಿದಾರರಾಗಿ ಸಹ ಗುರುತಿಸಿಕೊಳ್ಳುವ ಮೂಲಕ ಹಲವಾರು ಪಂದ್ಯಗಳಲ್ಲಿ ತೀರ್ಪುಗಾರ ರಾಗಿ ಕಾರ್ಯನಿರ್ವಹಿಸಿದ್ದರು. ಕೆಲವು ವರ್ಷಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಚೇತರಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು