ಭದ್ರಾವತಿ-ನಾಳೆ ಬೆಳಿಗ್ಗೆಯಿಂದಲೇ ಪವರ್ ಕಟ್

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಹಿನ್ನಲೆಯಲ್ಲಿ ಮೆಸ್ಕಾಂ ಘಟಕ-3ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತೆರವು ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ.17ರ ನಾಳೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೊಸ ಸಿದ್ದಾಪುರ, ಬೈಪಾಸ್ ರಸ್ತೆ, ನೀರು ಸರಬ ರಾಜು ಘಟಕ(ಪಂಪ್ ಹೌಸ್), ಎನ್‌ಟಿಬಿ ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇ ಸಿದ್ದಾಪುರ, ತಾಂಡ್ಯ, ಹೊಸೂರು, ಸಂಕ್ಲಿಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿ ಸುವಂತೆ ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು