ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ

ವಿಜಯ ಸಂಘರ್ಷ ನ್ಯೂಸ್ 
ಹುಣಸಗಿ: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ನೌಕರರ ಸಂಘ ಅರ್ಜಿ ಅಹ್ವಾನಿಸಿದ್ದು ಎಸ್ ಎಸ್ ಎಲ್ ಸಿ, ಪಿಯುಸಿ ಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ: 31 ರೊಳಗೆ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಬ್ರೇಶ ಮಾಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

2024-25 ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಎಲ್ಲಿ ಶೇಕಡ 90% ಕ್ಕಿಂತ ಅಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿ ಗಳು ಆನ್ಲೈನ್ ವಿಳಾಸ https:// ks-geanews.blogspot.com ಮೂಲಕ ಅರ್ಜಿ ಸಲ್ಲಿಸ ಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಂದೆ - ತಾಯಿ ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಆಗಿರಬೇಕು ಸಂಘವು ನಿಗದಿ ಪಡಿಸಿದ ನಮೂನೆಯಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಸಂಬಂಧಿ ಸಿದ ತಾಲೂಕ ಶಾಖೆಯ ನೌಕರರ ಸಂಘದ ಅಧ್ಯಕ್ಷರ ರುಜು ಮೋಹರಿ ನೊಂದಿಗೆ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

✍️ವರದಿ: ಶಿವು ರಾಠೋಡ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು