ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಕರ್ನಾಟಕ ನೀರಾವರಿ ನಿಗಮ ಇಲಾಖಾ ವತಿಯಿಂದ ಸಮುದಾಯ ಭವನಗಳಿಗೆ ಕಾನೂನು ಬಾಹಿರವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿ ಫಿಲ್ಟರ್ ಶೆಡ್ ನಾಗರಿಕರ ಹಿತರಕ್ಷಣ ಸಮಿತಿ ವತಿಯಿಂದ ಬಿಆರ್ ಎಲ್ ಬಿ ಸಿ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜನ್ನಾಪುರ ಶ್ರೀ ಅಂತರ ಘಟ್ಟಮ್ಮ ಸಾರ್ವಜನಿಕ ಸಮುದಾಯ ಭವನದ ಕಾಮಗಾರಿಗೆ ಮೇಲ್ಕಂಡ ಯೋಜನೆಯಡಿ 2019-2020 ರಲ್ಲಿ 15ಲಕ್ಷ ಅನುದಾನ ಬಿಡುಗಡೆಯಾಗಿರು ತ್ತದೆ. ಟ್ರಸ್ಟ್ ಅಧಿಕೃತ ನೊಂದಣಿಯಾಗಿ ರುವುದಿಲ್ಲಾ, ಸರ್ಮಪಕ ದಾಖಲೆಗಳಿ ರುವುದಿಲ್ಲದಿದ್ದರೂ ಅನುದಾನ ಬಿಡುಗಡೆ ಮಾಡಿರುತ್ತಾರೆ. ಈ ಹಿನ್ನಲೆ ಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಸಮುದಾಯ ಭವನದ ಟ್ರಸ್ಟ್ ನೊಂದಣಿಯಾಗಿರುವುದು 2022-23 ರಲ್ಲಿ ಭವನಕ್ಕೆ ನಗರಸಭೆ ಯವರು VISL ಸೇರಿದ ಜಾಗಕ್ಕೆ ಆಕ್ರಮವಾಗಿ ಸರ್ಕಾರಿ ಜಾಗವೆಂದು ಖಾತೆ ಮಾಡಿ ಕೊಟ್ಟಿರುವುದು ದುರಂತ. ಆದ್ದರಿಂದ ಸೂಕ್ತ ತನಿಖೆ ನಡೆಸಿ ಅಕ್ರಮದಲ್ಲಿ ಭಾಗಿವಾಗಿರುವ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳುವಂತೆ ಆಗ್ರಹಿಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ಹೋರಾಟಗಾರ ಶಶಿ ಕುಮಾರ್ ಎಸ್ ಗೌಡ ಪ್ರತಿಭಟನೆಯ ನೇತೃತ್ವ ವಹಿಸಿ ದ್ದರು. ದಿವ್ಯಶ್ರೀ, ಇಂದ್ರಮ್ಮ,ಮಾಲಮ್ಮ, ಮುನಿಯಮ್ಮ, ಮಾದೇವಿ, ಸುರೇಶ್, ಪರಮೇಶ್ವರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.