ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಗುಂಡಪ್ಪ ಶೆಡ್ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ ಯಾಗಿದ್ದು ಇದೊಂದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
ರೈಲ್ವೆ ಹಳಿಯ ಮಧ್ಯೆ ವ್ಯಕ್ತಿಯ ಶವ ಪತ್ತೆ ಯಾಗಿದ್ದು, ಬೆಳಿಗ್ಗೆ 4 ಗಂಟೆಗೆ ಬೆಂಗಳೂರಿ ನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ರೈಲಿಗೆ ಸಿಲುಕಿರಬಹುದು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವನ ಗುರುತು ಇನ್ನೂ ಪತ್ತೆಯಾಗಿಲ್ಲ. ಈತ ಸ್ಥಳೀಯನು ಅಲ್ಲ ಎಂದು ತಿಳಿದುಬಂದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Tags
ಭದ್ರಾವತಿ ಅನಾಮದೇಯ ಶವ