ಇದೆಂಥ ಅಮಾನವೀಯ ಕೃತ್ಯ: ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!

ವಿಜಯ ಸಂಘರ್ಷ ನ್ಯೂಸ್ 
ಸಾಗರ: ತಾಲೂಕಿನ ಗೌತಮಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಯೊಂದು ನಡೆದಿದೆ. ಹುಚ್ಚಮ್ಮ (67) ಎಂಬಾಕೆಯನ್ನು ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮದ ಹುಚ್ಚಮ್ಮ ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ ಕಸ ತಂದು ಹಾಕಿದ್ದನ್ನು ಪ್ರಶ್ನಿಸಿದ್ದರು. ಈ ಸಣ್ಣ ವಿಷಯಕ್ಕೆ ಕೋಪ ಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮ ಅವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಹಗ್ಗದಿಂದ ಕಂಬಕ್ಕೆ ಕಟ್ಟಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣ ಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 ಹುಚ್ಚಮ್ಮ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ಪುತ್ರ ಕನ್ನಪ್ಪ, ತಾಯಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

 ಆನಂದಪುರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಾದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು